ಕರಾವಳಿ

ಕೊಳತ್ತಮಜಲು ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್


ಬಂಟ್ವಾಳ: ಕೊಳತ್ತಮಜಲು ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ರಿಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ನೋಟಿಸ್ ನೀಡಿದ್ದು, ವಿಚಾರಣೆಗೆ ಸಹಕರಿಸುವಂತೆ ಸೂಚಿಸಿದ್ದಾರೆ.



ಕಲ್ಲಡ್ಕ ಪ್ರಭಾಕರ್ ಭಟ್‌ ಹೇಳಿಕೆ ದಾಖಲಿಸಲು ಬಾಕಿಯಿದ್ದು, ಹೇಳಿಕೆ ಪಡೆಯುವ ಸಲುವಾಗಿ ಭಟ್‌ ರಿಗೆ ಸಾಕ್ಷಿದಾರ ನೋಟಿಸ್ ಜಾರಿ ಮಾಡಲಾಗಿದೆ. ಅವರ ಹೇಳಿಕೆ ದಾಖಲಿಸಿಕೊಂಡ ಬಳಿಕ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!