ಕರಾವಳಿಕ್ರೈಂ

ಬಂಟ್ವಾಳ: ವ್ಯಕ್ತಿಗೆ ಹಲ್ಲೆ, ಮೂವರು ಆರೋಪಿಗಳ ಬಂಧನ



ಬಂಟ್ವಾಳ: ತೆಂಕಬೆಳ್ಳೂರು ಗ್ರಾಮದ ಕಮಾಜೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.


ಬಂಧಿತರನ್ನು ಅಮ್ಮುಂಜೆ ನಿವಾಸಿ ಪ್ರಶಾಂತ್ (38), ತೆಂಕಬೆಳ್ಳೂರು ನಿವಾಸಿ ರಾಮದಾಸ್ (43) ಹಾಗೂ ಬಡಗಬೆಳ್ಳೂರು ನಿವಾಸಿ ಶಂಕರ (45) ಎಂದು ಗುರುತಿಸಲಾಗಿದೆ.



ತೆಂಕಬೆಳ್ಳೂರು ಗ್ರಾಮದ ಪ್ರಶಾಂತ್ ಬೆಳ್ಚಾಡ ಅವರು
ಸೆ.20ರಂದು ಸಂಜೆ ಕಮಾಜೆಯಲ್ಲಿದ್ದ ವೇಳೆ ಆಟೊ ರಿಕ್ಷಾದಲ್ಲಿ ಬಂದ ಪರಿಚಯಸ್ಥರಾದ ಪ್ರಶಾಂತ್, ರಾಮದಾಸ್ ಹಾಗೂ ಶಂಕರ ಎಂಬವರು ತಲವಾರು ಮತ್ತು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಬಗ್ಗೆ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಸೆ.25ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ಆರೋಪಿಗಳನ್ನು 3 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!