ಕರಾವಳಿಕ್ರೈಂ

ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್: 24 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶ



ಮಂಗಳೂರು: ನಿಷೇಧಿತ ಮಾದಕ ವಸ್ತು (ಎಂಡಿಎಂಎ) ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಮಾರು 24 ಲಕ್ಷ ರೂ. ಮೌಲ್ಯದ 240 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.



ಉಳ್ಳಾಲದ ಮುಡಿಪುವಿನ ಕೈರಂಗಳ ಗ್ರಾಮ ನಿವಾಸಿ ನವಾಜ್ ಯಾನೆ ನವ್ವಾ ಯಾನೆ ಮುಡಿಪು ನವಾಜ್(35), ಉಳ್ಳಾಲದ ಮುಡಿಪುವಿನ ಕೈರಂಗಳ ನಿವಾಸಿ ಮೊಹಮ್ಮದ್ ಆರೀಫ್ ಎನ್(36), ಉಳ್ಳಾಲದ ಮುಡಿಪುವಿನ ಕೈರಂಗಳ ನಿವಾಸಿ ಲಾಯ್ಡ್ ಡಿಸೊಜಾ(35) ಬಂಧಿತ ಆರೋಪಿಗಳು.


ಆರೋಪಿಗಳು ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಖರೀದಿಸಿ ಅದನ್ನು ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಸೆ. 26ರಂದು ಸಂಜೆ ಉಳ್ಳಾಲ ತಾಲೂಕು ಮುಡಿಪು ಕಾಯರ್ ಗೋಳಿ ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.


ಬಂಧಿತ ಆರೋಪಿಗಳಿಂದ ಸುಮಾರು 24,00,000 ರೂ. ಮೌಲ್ಯದ 240 ಗ್ರಾಂ ಎಂಡಿಎಂಎ ಹಾಗೂ 4 ಮೊಬೈಲ್ ಫೋನ್, ಮಾದಕ ವಸ್ತು ಸಾಗಾಟಕ್ಕೆ ಬಳಸಿದ ಟೆಂಪೋ ವಾಹನ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 29,80,000 ರೂ. ಆಗಿರುತ್ತದೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!