ಕರಾವಳಿಕ್ರೈಂ

ಜೈಲಿನಲ್ಲಿ ಮಾಡೂರು ಯೂಸುಫ್ ಕೊಲೆ ಪ್ರಕರಣ: ಐವರು ಆರೋಪಿಗಳು ದೋಷಿ



ಮಂಗಳೂರು: 2015ರಲ್ಲಿ ಮಂಗಳೂರು ಸಬ್‌ಜೈಲಿನಲ್ಲಿ ನಡೆದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಐವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿದೆ.

ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಲಿತೇಶ್ ಪೂಜಾರಿ, ಶೋಭರಾಜ್, ಯುವರಾಜ್, ಪ್ರದೀಪ್ ಹಾಗೂ ಉಮೇಶ್ ಕೊಂಬಾರ್ ಅವರು ಆರೋಪ ಸಾಬೀತಾಗಿ ದೋಷಿಗಳೆಂದು ತೀರ್ಪು ನೀಡಲಾಗಿದೆ.


ಉಳಿದ ಆರೋಪಿಗಳಾದ ಶರಣ್ ಪೂಜಾರಿ, ಮಹೇಶ್ ಕುಮಾರ್, ಕಮಲಾಕ್ಷ ಪೂಜಾರಿ, ಸತೀಶ್ ಪೂಜಾರಿ ಹಾಗೂ ಲತೀಶ್ ಅವರನ್ನು ಆರೋಪದಿಂದ ಖುಲಾಸೆಗೊಳಿಸಲಾಗಿದೆ. ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವುದು ಬಾಕಿಯಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಮೋಹನ್ ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!