ಕರಾವಳಿಕ್ರೈಂ

16 ಗ್ರಾಂ MDMA ವಶ: ಯುವಕನ ವಿರುದ್ಧ ಪ್ರಕರಣ ದಾಖಲು


ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸುಮಾರು ₹1.60 ಲಕ್ಷ ಮೌಲ್ಯದ 16 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದು, ಓರ್ವನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.



ಸೆ.29ರಂದು ಮರಕಡ ಗ್ರಾಮದ ಬೊಂದೇಲ್‌ನಿಂದ ಮೂಡುಶೆಡ್ಡೆ ಕಡೆಗೆ ಸಾಗುವ ಡಾಮಾರು ರಸ್ತೆಯ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಮೊಹಮ್ಮದ್ ಇರ್ಫಾನ್ ಎ.ಕೆ. (26) ಎಂಬಾತನನ್ನು ಪೊಲೀಸರು ಪರಿಶೀಲಿಸಿದ್ದಾರೆ. ಈ ವೇಳೆ ಆತನ ವಶದಲ್ಲಿದ್ದ ಸುಮಾರು 16 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.



ವಶಪಡಿಸಿಕೊಂಡ MDMAಯ ಅಂದಾಜು ಮೌಲ್ಯ ₹1,60,000 ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 128/2026ರಂತೆ NDPS ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

error: Content is protected !!