ಕರಾವಳಿಕ್ರೈಂ

ಮಂಗಳೂರು ಜೈಲಿನಲ್ಲಿ ಮಾಡೂರು ಯುಸೂಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ



ಮಂಗಳೂರು: 2015ರಲ್ಲಿ ಮಂಗಳೂರು ಕಾರಾಗೃಹದಲ್ಲಿ ನಡೆದ ಮಾಡೂರು ಯುಸೂಫ್ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹76 ಸಾವಿರ ದಂಡ ವಿಧಿಸಿದೆ.



ಲಿತೇಶ್ ಪೂಜಾರಿ @ ಲಿತ್ತು, ಶೋಭರಾಜ್ @ ಶೋಭಿ, ಯುವರಾಜ್, ಪ್ರದೀಪ್ ಹಾಗೂ ಉಮೇಶ್ ಕೊಂಬಾರ್ @ ಉಮೇಶ್ ಕುಂಬಾರ ಶಿಕ್ಷೆಗೆ ಗುರಿಯಾದವರು. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಅ.1ರಂದು ತೀರ್ಪು ಪ್ರಕಟಿಸಿದರು.


2015ರ ನವೆಂಬರ್ 2ರಂದು ಮಂಗಳೂರು ಕಾರಾಗೃಹದಲ್ಲಿ ಮಾಡೂರು ಯುಸೂಫ್ ಹತ್ಯೆಯಾಗಿದ್ದು, ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಎಸಿಪಿ ತಿಲಕ್ ಚಂದ್ರ ತನಿಖೆ ನಡೆಸಿ ಆರೋಪಿಗಳ ವಿರುದ್ಧ ದೋಷಾರೋಪಣ ಪತ್ರ ಸಲ್ಲಿಸಿದ್ದರು. ವಿಶೇಷ ಸರ್ಕಾರಿ ಅಭಿಯೋಜಕ ಬಿ. ಮೋಹನ್ ಕುಮಾರ್ ಸರ್ಕಾರದ ಪರವಾಗಿ ವಾದಿಸಿದ್ದರು.

Leave a Reply

Your email address will not be published. Required fields are marked *

error: Content is protected !!