ಅಂತಾರಾಷ್ಟ್ರೀಯರಾಷ್ಟ್ರೀಯ

ನಾಯಕಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಘೋಷಿಸಿದ ಹರ್ಮನ್‌ಪ್ರೀತ್ ಕೌರ್



ನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ತಮ್ಮ ನಾಯಕತ್ವದ ಹುದ್ದೆಗೆ ದಿಢೀರ್ ರಾಜೀನಾಮೆ ಘೋಷಿಸಿದ್ದಾರೆ.
ಈ ಕುರಿತು ಅ. 6 ರಂದು ಅಧಿಕೃತವಾಗಿ ಈ ನಿರ್ಧಾರ ಪ್ರಕಟಿಸಿರುವ ಅವರು, ನಾಯಕತ್ವದ ಜವಾಬ್ದಾರಿಯಿಂದ ಕೆಳಗಿಳಿಯುತ್ತಿರುವುದಾಗಿ ಹೇಳಿದ್ದಾರೆ. ಹರ್ಮನ್‌ಪ್ರೀತ್ ಅವರ ಈ ನಿರ್ಧಾರ ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.


ಇತ್ತೀಚೆಗಷ್ಟೇ ನಡೆದ ಏಷ್ಯನ್ ಗೇಮ್ಸ್ ನಲ್ಲಿ ಹರ್ಮನ್‌ಪ್ರೀತ್ ಅವರ ನಾಯಕತ್ವದಲ್ಲಿ ಭಾರತ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿತ್ತು. ಭಾರತೀಯ ಮಹಿಳಾ ಕ್ರಿಕೆಟ್‌ಗೆ ಐಸಿಸಿ ವಿಶ್ವಕಪ್ ಟ್ರೋಫಿ ಜೊತೆಗೆ ತಂಡಕ್ಕೆ ಹಲವು ಪ್ರಶಸ್ತಿಗಳನ್ನು  ಅವರು ತಂದುಕೊಟ್ಟಿದ್ದಾರೆ.
ಯಶಸ್ಸಿನ ಉತ್ತುಂಗದಲ್ಲಿದ್ದಾಗಲೇ ನಾಯಕತ್ವ ತ್ಯಜಿಸುವ ನಿರ್ಧಾರ ಕೈಗೊಂಡಿರುವುದು ಕ್ರಿಕೆಟ್ ವಲಯದಲ್ಲಿ ಅಚ್ಚರಿ ಮೂಡಿಸಿದೆ.

ಇದೀಗ ಸ್ಮೃತಿ ಮಂಧಾನ ಅವರನ್ನು ಏಕದಿನ ಮತ್ತು ಟಿ20 ಪಂದ್ಯಗಳಿಗೆ ನಾಯಕಿಯಾಗಿ ನೇಮಿಸಲಾಗಿದೆ. ಟೆಸ್ಟ್ ಮಾದರಿಗೆ ನಾಯಕಿ ಯಾರು ಎಂಬುದು ಇನ್ನು ಖಚಿತವಾಗಿಲ್ಲ.

Leave a Reply

Your email address will not be published. Required fields are marked *

error: Content is protected !!