ರಾಷ್ಟ್ರೀಯ

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು 2027ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ.


ಈ ಕುರಿತು ಡೆಲ್ಲಿ ಕ್ಯಾಪಿಟಲ್ಸ್ ಆಡಳಿತ ಮಂಡಳಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು 2019ರಲ್ಲಿ ಸಲಹೆಗಾರರಾಗಿ ಡೆಲ್ಲಿ ಕ್ಯಾಪಿಟಲ್ಸ್ ಜೊತೆ ಕೈಜೋಡಿಸಿದ್ದ ಗಂಗೂಲಿ, ಬಳಿಕ ಪುರುಷ ಹಾಗೂ ಮಹಿಳಾ ಎರಡೂ ತಂಡಗಳ ‘ಡೈರೆಕ್ಟರ್ ಆಫ್ ಕ್ರಿಕೆಟ್’ ಸೇರಿದಂತೆ ಹಲವು ಪ್ರಮುಖ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮುಂದಿನ ಆವೃತ್ತಿಯಲ್ಲಿ  ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮುಖ್ಯ ಕೋಚ್ ಆಗಿ ತಂಡಕ್ಕೆ ಮಾರ್ಗದರ್ಶನ ನೀಡಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!