ರಾಷ್ಟ್ರೀಯ

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ, ಖ್ಯಾತ ಯೌಟ್ಯೂಬರ್ ಧ್ರುವ್ ರಾಠಿ ಸೇರಿದಂತೆ ಪ್ರಮುಖ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಸೇರಿದಂತೆ ಪ್ರಮುಖ ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಪ್ರತಿಭಟನೆಗೆ ಮುನ್ನ ಪೊಲೀಸರು ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮ ತೀವ್ರಗೊಂಡಿವೆ.



ಸಿಜೆಪಿ ನಾಯಕರು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನದಲ್ಲಿ ಬಂದಿಳಿದ ಕೂಡಲೇ ಭದ್ರತಾ ಸಿಬ್ಬಂದಿ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಮುನ್ನ, ಯೂಟ್ಯೂಬರ್ ಧ್ರುವ್ ರಾಠಿಯನ್ನು ದೆಹಲಿ ಪೊಲೀಸರು ಅವರ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!