ಮಂಗಳೂರು:ಚೂರಿಯಿಂದ ಇರಿದು ಪತಿಯಿಂದ ಪತ್ನಿಯ ಕೊಲೆ
ಮಂಗಳೂರು: ಪತಿಯೊಬ್ಬ ತನ್ನ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಸೋನಾಲಿ (30) ಎಂದು ಗುರುತಿಸಲಾಗಿದ್ದು, ಈಕೆಯನ್ನು ಆಕೆಯ ಪತಿ ಶಿವಲಿಂಗಪ್ಪ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ ಕೊಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

