ಕರಾವಳಿರಾಜಕೀಯ

2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ-ರಘುಪತಿ ಭಟ್

ಮಂಗಳೂರು: 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ. ಆದರೆ ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.


ಪತ್ರಕರ್ತರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ಬಿಜೆಪಿಯಿಂದಲೂ ಕರೆಯ ನಿರೀಕ್ಷೆಯಲ್ಲಿದ್ದೇನೆ. ಬಿಜೆಪಿ ಆಹ್ವಾನ ನೀಡಿದರೆ ಅದರ ಬಗ್ಗೆಯೂ ಯೋಚಿಸಬಹುದು. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಯಾವುದೇ ನಿರ್ಧಾರ ಕೈಗೊಳ್ಳುತ್ತೇನೆ.

Leave a Reply

Your email address will not be published. Required fields are marked *

error: Content is protected !!