ಕರಾವಳಿ

ವಿಟ್ಲ: ಕಳ್ಳತನ ಪ್ರಕರಣ, ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ



ವಿಟ್ಲ: ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.



ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 110/2019ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 457 ಮತ್ತು 380ರಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಂಶೀದ್ ನನ್ನು ವಿಟ್ಲ ಪೊಲೀಸ್ ಠಾಣೆಯ ಎಎಸ್‌ಐ ಜಯರಾಮ ಹಾಗೂ ಸಿಪಿಸಿ 2462 ಶಿವಾನಂದ ಅವರು ಅ.13ರಂದು ಕೇರಳದ ನೀಲಂಬೂರು ವಂಡೂರು ಎಂಬಲ್ಲಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!