ಕರಾವಳಿಕ್ರೈಂ

ಸಂಟ್ಯಾರ್: ಕಾರಿಗೆ ಡಿಕ್ಕಿ ಹೊಡೆದು ಹೆದ್ದಾರಿ ಮಧ್ಯೆ  ಮಗುಚಿ ಬಿದ್ದ ಲಾರಿ

ಪುತ್ತೂರು : ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಬಳಿ ಇಂದು ಭೀಕರ ಅಪಘಾತ ಸಂಭವಿಸಿದ್ದು, ಓವರ್‌ಟೇಕ್ ಭರದಲ್ಲಿ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಲಾರಿಯು ರಸ್ತೆಗೆ ಅಡ್ಡಲಾಗಿ ಮಗುಚಿಬಿದ್ದಿದ್ದು, ಪರಿಣಾಮವಾಗಿ ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.


ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪೂರ್ಣ ರಸ್ತೆ ತಡೆ ಉಂಟಾಗಿದ್ದು ವಾಹನಗಳು ಸಾಲುಗಟ್ಟಿ ನಿಂತಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಸಂಚಾರವನ್ನು ಸುಗಮಗೊಳಿಸಲು ಹರಸಾಹಸ ಪಟ್ಟಿದ್ದಾರೆ. ವಾಹನ ಸವಾರರು ಬದಲಿ ಮಾರ್ಗವನ್ನು ಬಳಸುವಂತೆ ಮನವಿ ಮಾಡಲಾಗಿದೆ. ಮದ್ಯಾಹ್ನ 2.30ರ ವೇಳೆಗೆ ಲಾರಿಯನ್ನು ಮತ್ತು ಕಾರನ್ನು ರಸ್ತೆಯಿಂದ ತೆರವು ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!