ಕರಾವಳಿಕ್ರೈಂ

ಬಂಟ್ವಾಳ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ



ಬಂಟ್ವಾಳ: ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಎರ್ಮುಡೆ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ದಾಳಿ ನಡೆಸಿದ್ದಾರೆ.



ಅ.18ರಂದು ಸಂಜೆ ವೇಳೆ ಎರ್ಮುಡೆ ಪ್ರದೇಶದಲ್ಲಿ ಕೋಳಿ ಅಂಕದ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ (ಕಾ&ಸು) ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಯುತ್ತಿರುವುದು ದೃಢಪಟ್ಟಿದೆ.

ಸಾಂದರ್ಭಿಕ ಚಿತ್ರ



ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಕೃತ್ಯದಲ್ಲಿ ಭಾಗಿಯಾಗಿದ್ದವರು ಪರಾರಿಯಾಗಿದ್ದು, ಬಂಟ್ವಾಳ ಬಿ ಮೂಡ ಗ್ರಾಮದ ಗಣೇಶ್ (33) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

ಸ್ಥಳದಲ್ಲಿದ್ದ 12 ಅಂಕದ ಕೋಳಿಗಳು, ಕೋಳಿ ಅಂಕಕ್ಕೆ ಬಳಸುವ ಕತ್ತಿ ಹಾಗೂ ₹1,100 ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 147/2026ರಂತೆ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 87 ಮತ್ತು 93 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(1)(m)(ii) ಮತ್ತು 11(1)(n) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!