ಕರಾವಳಿಕ್ರೈಂ

ಸವಣೂರು: ಜೂಜಾಟ ಅಡ್ಡೆಗೆ ಪೊಲೀಸರ ದಾಳಿ: ಐವರು ವಶಕ್ಕೆ



ಪುತ್ತೂರು: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಕುವತ್ತೋಡಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ–ಪಿದಾಯಿ ಜೂಜಾಟ ಆಡುತ್ತಿದ್ದ ಅಡ್ಡೆಗೆ ಬೆಳ್ಳಾರೆ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ.

ಸಾಂದರ್ಭಿಕ ಚಿತ್ರ



ಅ.20ರಂದು ಸಂಜೆ  ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಈರಯ್ಯ ಡಿ.ಎನ್ ಅವರಿಗೆ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಜೂಜಾಟದಲ್ಲಿ ತೊಡಗಿಸಿಕೊಂಡಿದ್ದ ಗುರವ, ಇಸೂಬು, ಕುಶಾಲಪ್ಪ, ತಾಜುದ್ದೀನ್ ಹಾಗೂ ರಾಮಣ್ಣ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.

ದಾಳಿಯ ವೇಳೆ ಜೂಜಾಟಕ್ಕೆ ಬಳಸಲಾಗಿದ್ದ ₹18,150 ನಗದು, ಇಸ್ಪೀಟು ಎಲೆಗಳು ಹಾಗೂ ಇತರೆ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/2026ರಂತೆ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 87ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!