ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2007ರಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯ ಅಪರಾಧ ಕ್ರಮಾಂಕ 139/2007ರ ಐಪಿಸಿ ಕಲಂ 366, 368, 420, 120 ಹಾಗೂ 149ರ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಟ್ವಾಳದ ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್ ಮಹಮ್ಮದ್ ಇರ್ಷಾದ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಅ.21ರಂದು ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್‌ಐ ಸುಜು ಹಾಗೂ ಸಿಬ್ಬಂದಿಗಳಾದ ಜಗದೀಶ್ ಮತ್ತು ಮಂಜುನಾಥ್ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯ ಪಾಸ್‌ಪೋರ್ಟ್ ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

