ಕರಾವಳಿಕ್ರೈಂ

ವೇಣೂರು: ಯುವತಿಗೆ ಲೈಂಗಿಕ ಕಿರುಕುಳ ಆರೋಪ, ಆರೋಪಿ ಪೊಲೀಸ್ ವಶಕ್ಕೆ


ಬೆಳ್ತಂಗಡಿ: ಯುವತಿಯೊಬ್ಬರಿಗೆ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ 61 ವರ್ಷದ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.



ಅ.24ರಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಯುವತಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ಎಂಬಾತ ಸಾರ್ವಜನಿಕ ಸ್ಥಳದಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ಮಾತನಾಡಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.


ಈ ಕುರಿತು ಯುವತಿಯು ನೀಡಿದ ದೂರಿನ ಆಧಾರದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 73/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS), 2023ರ ಕಲಂ 75(1)(ii), 75(1)(iv), 79 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪ್ರಕರಣದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!