ಕರಾವಳಿರಾಜಕೀಯ

ಪುತ್ತೂರು ಬ್ಲಾಕ್ ಕಾಂಗ್ರೆಸ್ ಸೇವಾ ದಳದ ಅಧ್ಯಕ್ಷರಾಗಿ ಪ್ರವೀಣ್ ಆಚಾರ್ಯ ನೇಮಕ




ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಸೇವಾ ದಳದ ಅಧ್ಯಕ್ಷರಾಗಿ ಪ್ರವೀಣ್ ಆಚಾರ್ಯ ನರಿಮೊಗರು ನೇಮಕಗೊಂಡಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಅವರ ಶಿಫಾರಸ್ಸಿನಂತೆ ದ.ಕ ಜಿಲ್ಲಾ ಸೇವಾ ದಳದ ಜೋಕಿಂ ಡಿಸೋಜಾ ಅವರ ಆದೇಶದಂತೆ ಈ ನೇಮಕಾತಿ ನಡೆದಿದ್ದು ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ ಅವರ ಸಮ್ಮುಖದಲ್ಲಿ ಪ್ರವೀಣ್ ಆಚಾರ್ಯ ಅವರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರ ಮಾಡಲಾಯಿತು.

ಪ್ರಸ್ತುತ ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ಪ್ರವೀಣ್ ಆಚಾರ್ಯ ಅವರು ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದು ಪ್ರಾಕೃತಿಕ ವಿಕೋಪ ಸೇರಿದಂತೆ ಇನ್ನಿತರ ತುರ್ತು ಸಂದರ್ಭಗಳಲ್ಲಿ ಜನರಿಗೆ ನೆರವಾಗುವ ಮೂಲಕ ಆಪತ್ಬಾಂವರಾಗಿ ಗುರುತಿಸಿಕೊಂಡಿದ್ದಾರೆ. ರಾಜಕೀಯ ಕ್ಷೇತ್ರದ ಜೊತೆಗೆ ಸಾಮಾಜಿಕವಾಗಿ, ಧಾರ್ಮಿಕವಾಗಿ ಮತ್ತು ಶೈಕ್ಷಣಿಕವಾಗಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಅವರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!