ಕರಾವಳಿ

ಸಾಮಾಜಿಕ, ಧಾರ್ಮಿಕ ಮುಂದಾಳು ವೇದನಾಥ ಸುವರ್ಣ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ



ಪುತ್ತೂರು: ಧಾರ್ಮಿಕ, ಸಾಮಾಜಿಕ, ರಾಜಕೀಯ, ಸಹಕಾರ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸುಮಾರು 40 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕೆ. ವೇದನಾಥ ಸುವರ್ಣ ನರಿಮೊಗರು ಅವರು 2026ನೇ ಸಾಲಿನ ದಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ಧಾರ್ಮಿಕ ಕ್ಷೇತ್ರದಲ್ಲಿ ಹಲವು ದೇವಸ್ಥಾನಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ಸಮಿತಿಯಲ್ಲಿ 2017ರಿಂದ 2020ರವರೆಗೆ ಸಲಹೆಗಾರರಾಗಿ ಜವಾಬ್ದಾರಿ ನಿರ್ವಹಿಸಿದ್ದರು. 
ಕೈಪಂಗಳ ಬಾರಿಕೆ ಬ್ರಹ್ಮ ಬೈದರ್ಕಳ ಗರಡಿಯ ಆಡಳಿತ ಮಂಡಳಿಯ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಕಳೆದ 26 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಗರಡಿಯ ಜೀರ್ಣೋದ್ಧಾರ ಕಾರ್ಯದಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದಾರೆ.
ಸಮಾಜಮುಖಿ ಸೇವೆ ಹಾಗೂ ವಿವಿಧ ಕ್ಷೇತ್ರಗಳಲ್ಲಿನ ತಮ್ಮ ದೀರ್ಘಕಾಲದ ಸೇವೆಯನ್ನು ಪರಿಗಣಿಸಿ, 2026ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಕೆ. ವೇದನಾಥ ಸುವರ್ಣ ಅವರನ್ನು ಪರಿಗಣಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!