ಕರಾವಳಿ

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಇಬ್ಬರು ಬೈಕ್ ಸವಾರರು ಮೃತ್ಯು



ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಚರ್ಚ್ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-73ರ ರಸ್ತೆಯಲ್ಲಿ ನ. 11ರಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ.



ಬೆಳ್ತಂಗಡಿ ನಾವೂರು ನಿವಾಸಿ ನವೀನ್ ಎಸ್. (39) ಎಂಬವರು ನೀಡಿದ ದೂರಿನ ಪ್ರಕಾರ, ಅವರ ಅಣ್ಣ ಸಂತೋಷ್ ಜೆ. (39) ಅವರು ದ್ವಿಚಕ್ರ ವಾಹನದಲ್ಲಿ ಬೆಳ್ತಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದರು. ಇದೇ ವೇಳೆ ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ  ಟಾಟಾ ಇಂಟ್ರಾ ಗೂಡ್ಸ್ ವಾಹನವನ್ನು ಚಾಲಕ ಪುನೀತ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದರು.
ಚರ್ಚ್ ಕ್ರಾಸ್ ಬಳಿ ಗೂಡ್ಸ್ ವಾಹನವು ಚಾಲಕನ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಬೆಳ್ತಂಗಡಿ ಕಡೆಯಿಂದ ಗುರುವಾಯನಕೆರೆ ಕಡೆಗೆ ತೆರಳುತ್ತಿದ್ದ ಮೋಹನ್ ಅವರು ಚಲಾಯಿಸುತ್ತಿದ್ದ ಮೋಟಾರ್ ಸೈಕಲ್ ಹಾಗೂ ಸಂತೋಷ್ ಜೆ. ಅವರು ಸವಾರಿ ಮಾಡುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.


ಅಪಘಾತದ ಪರಿಣಾಮ ಮೋಹನ್ ಹಾಗೂ ಸಂತೋಷ್ ಜೆ. ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಇಬ್ಬರೂ ಮೃತಪಟ್ಟಿದ್ದಾರೆ.
ಈ ಕುರಿತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 90/2026, ಕಲಂ 281 ಹಾಗೂ 106(1) ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!