ಕರಾವಳಿ

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದ ಬಳಿ ಮಾನವ ಬುರುಡೆ ಪತ್ತೆ


ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪ ರಾಜ್ಯ ಹೆದ್ದಾರಿ ಬದಿಯಲ್ಲಿ ಮಾನವ ದೇಹದ ಬುರುಡೆಯೊಂದು ಪತ್ತೆಯಾಗಿದೆ.


ಬಂಟ್ವಾಳ ಮೂಲದ ವ್ಯಕ್ತಿಯೊಬ್ಬರು ನ.12ರಂದು ಸಂಜೆ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ವಿದ್ಯುತ್ ಕಂಬಗಳಿಗೆ ಅಡ್ಡವಾಗಿದ್ದ ಮರದ ರೆಂಬೆಗಳನ್ನು ಕತ್ತರಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಹೆದ್ದಾರಿ ಬದಿಯಲ್ಲಿ ಮಾನವ ದೇಹದ ಬುರುಡೆಯೊಂದು ಕಂಡುಬಂದಿದೆ.


ಈ ಬಗ್ಗೆ ಅವರು ನ.12ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಅರ್ಜಿ ಸಲ್ಲಿಸಿದ್ದು, ದೂರರ್ಜಿ ಸಂಖ್ಯೆ 422/2026ರಂತೆ ಪೊಲೀಸರು ಅರ್ಜಿ ಸ್ವೀಕರಿಸಿದ್ದಾರೆ. ಈ ಕುರಿತು ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!