ಕರಾವಳಿಕ್ರೈಂ

ಬಂಟ್ವಾಳ ಮನೆ ಕಳವು ಪ್ರಕರಣ: ಆರೋಪಿ ನ್ಯಾಯಾಲಯಕ್ಕೆ ಶರಣು, 2 ದಿನ ಪೊಲೀಸ್ ಕಸ್ಟಡಿಗೆ



ಬಂಟ್ವಾಳ: ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪೈಕಿ ಓರ್ವ ಆರೋಪಿ ನ್ಯಾಯಾಲಯಕ್ಕೆ ಶರಣಾಗಿದ್ದು, ಆತನನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.



ಬಾಳ್ತಿಲ ಗ್ರಾಮದ ಕಾಂಪ್ರಬೈಲು ನಿವಾಸಿ ಸತೀಶ್ ಶೆಣೈ (57) ಎಂಬವರು 2026ರ ಫೆಬ್ರವರಿ 4ರಂದು ಸಂಜೆ ಮನೆಗೆ ಬೀಗ ಹಾಕಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ರಾತ್ರಿ ಮನೆಗೆ ಹಿಂತಿರುಗಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದಿರುವುದು ಕಂಡುಬಂದಿದೆ. ಮನೆಯೊಳಗೆ ಪರಿಶೀಲಿಸಿದಾಗ ಕೊಠಡಿಯ ಲಾಕರ್‌ನಲ್ಲಿದ್ದ ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 5 ಸಾವಿರ ರೂ. ನಗದು ಕಳವಾಗಿರುವುದು ಬೆಳಕಿಗೆ ಬಂದಿತ್ತು.



ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 17/2026ರಂತೆ BNS-2023ರ ಕಲಂ 331(3), 331(4) ಮತ್ತು 305ರಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಆರೋಪಿಗಳ ಪೈಕಿ ಬಂಟ್ವಾಳದ ಕೊಳ್ನಾಡು ನಿವಾಸಿ ಮೊಹಮ್ಮದ್ ಮಿಸ್ಪಾ (21) ಎಂಬಾತ ನ.11ರಂದು ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ಬಳಿಕ ಪ್ರಕರಣದ ತನಿಖೆಗಾಗಿ ಆತನನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

Leave a Reply

Your email address will not be published. Required fields are marked *

error: Content is protected !!