ಮಂಗಳೂರಿನಲ್ಲಿ ಇಬ್ಬರು ಬಾಂಗ್ಲಾದೇಶದ ಅಕ್ರಮ ವಲಸಿಗರ ಪತ್ತೆ
ಮಂಗಳೂರು: ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್‌ವೊಂದರಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

ರೆಸ್ಟೋರೆಂಟ್‌ನಲ್ಲಿ ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಅಕ್ರಮವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಣಂಬೂರು ಪೊಲೀಸ್ ಠಾಣೆಯ ನಿರೀಕ್ಷಕರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ರೆಸ್ಟೋರೆಂಟ್‌ಗೆ ದಾಳಿ ನಡೆಸಿ, ಕೆಲಸ ಮಾಡುತ್ತಿದ್ದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ಇಬ್ಬರೂ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರಿಸಿ, ಬಳಿಕ ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲು ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೊಲೀಸರು ಆರಂಭಿಸಿದ್ದಾರೆ.
ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಶ್ರೀಮತಿ ಶ್ರೀಕಲಾ ಕೆ.ಟಿ., ಜ್ಞಾನಶೇಖರ ಹಾಗೂ ಸಿಬ್ಬಂದಿಗಳಾದ ಇಮ್ತಿಯಾಝ್ ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಭಾಗವಹಿಸಿದ್ದರು.




