ಕರಾವಳಿಕ್ರೈಂ

ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ


ಬಂಟ್ವಾಳ: ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶಿಸಿದೆ.


ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಘಟನೆ ನಡೆದಿದ್ದು, ನೆರೆಮನೆಯ ನಿವಾಸಿ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪದಡಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಪ್ರಕರಣ ದಾಖಲಾಗಿತ್ತು.


ಆಗಿನ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಆರೋಪಿಯನ್ನು ಪತ್ತೆಹಚ್ಚಿ, ತನಿಖಾಧಿಕಾರಿಗಳು ಹಾಗೂ ಆಗಿನ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಪ್ರಕರಣದ ತನಿಖೆ ನಡೆಸಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ್ ಚೌಧರಿ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!