ಹಿರಿಯ ಸಮಾಜ ಸೇವಕ ಅರಿಯಡ್ಕ ಚಿಕ್ಕಪ್ಪ ನಾೖಕ್ ‘ಅರಿಯಡ್ಕ ರತ್ನ’ ಪ್ರಶಸ್ತಿಗೆ ಆಯ್ಕೆ
ಪುತ್ತೂರು: ಹಿರಿಯ ಸಮಾಜ ಸೇವಕ, ಕೃಷಿ, ಉದ್ಯಮ, ಸಹಕಾರಿ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಅರಿಯಡ್ಕ ಚಿಕ್ಕಪ್ಪ ನಾೖಕ್ಅವರು ‘ಅರಿಯಡ್ಕ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅರಿಯಡ್ಕ ವಲಯ ಕಾಂಗ್ರೆಸ್ ವತಿಯಿಂದ ನ.29ರಂದು ಕೌಡಿಚ್ಚಾರ್ನಲ್ಲಿ ನಡೆಯಲಿರುವ ಅರಿಯಡ್ಕ ಉತ್ಸವ-2026 ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಅರಿಯಡ್ಕ ಉತ್ಸವ ಪ್ರಯುಕ್ತ ಇದೇ ಮೊದಲ ಬಾರಿಗೆ ಅರಿಯಡ್ಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು ಅರಿಯಡ್ಕ ಚಿಕ್ಕಪ್ಪ ನಾೖಕ್ಅವರು ಸಮಾಜಕ್ಕೆ ಸಲ್ಲಿಸಿದ ಸುಧೀರ್ಘ ಸೇವೆ ಹಾಗೂ ಕೊಡುಗೆಯನ್ನು ಪರಿಗಣಿಸಿ ಅರ್ಹವಾಗಿಯೇ ಅವರನ್ನು ಅರಿಯಡ್ಕ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ತಿಳಿಸಿದ್ದಾರೆ.




