ಕರಾವಳಿಕ್ರೈಂ

ವಿಕೋಪಕ್ಕೆ ತಿರುಗಿದ ಗಲಾಟೆ: ಹರಿತವಾದ ಸಾಧನದಿಂದ ಚುಚ್ಚಿ ವ್ಯಕ್ತಿಯ ಕೊಲೆ



ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ನಡೆದ ಗಲಾಟೆಯೊಂದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನ.24ರಂದು ಸಂಜೆ ನಡೆದಿದೆ.

ಸಾಂದರ್ಭಿಕ ಚಿತ್ರ


ಚೆನ್ನಯ್ಯ ಪೂಜಾರಿ ಮೃತಪಟ್ಟವರು. ಅವರು ತಮ್ಮ ಸಹೋದರನ ಮಗಳು ವಾಸವಿದ್ದ ಮನೆಯ ಬಳಿ ಗಲಾಟೆ ನಡೆಸುತ್ತಿದ್ದ ವೇಳೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಸಹೋದರನ ಮಗಳು ಹರಿತವಾದ ಸಾಧನದಿಂದ ಚುಚ್ಚಿದ್ದು, ಗಂಭೀರ ಗಾಯಗೊಂಡ ಚೆನ್ನಯ್ಯ ಪೂಜಾರಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ದೂರು ಸ್ವೀಕರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!