ಗ್ರಾಮ ಆಡಳಿತ ಅಧಿಕಾರಿಗೆ ಕಚೇರಿಯಲ್ಲೇ ನಿಂದನೆ, ಜೀವಬೆದರಿಕೆ ಆರೋಪ: ಆರೋಪಿಯ ವಿರುದ್ಧ ಪ್ರಕರಣ ದಾಖಲು
ವಿಟ್ಲ: ಕರ್ತವ್ಯ ನಿರತ ಗ್ರಾಮ ಆಡಳಿತ ಅಧಿಕಾರಿಗೆ ಕಚೇರಿಯಲ್ಲೇ ಅವಾಚ್ಯವಾಗಿ ಬೈದು, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಜೀವಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನದಲ್ಲಿ ನ.23ರಂದು ನಡೆದಿದೆ.

ಕನ್ಯಾನ ಗ್ರಾಮದ ಗ್ರಾಮ ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅನಿಲ್ ಕುಮಾರ್ (35) ಅವರು ಸೋಮವಾರ ಅಪರಾಹ್ನ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ವೇಳೆ, ಕನ್ಯಾನ ಗ್ರಾಮದ ಪನೆಯಡ್ಕ ನಿವಾಸಿ ಮಹಮ್ಮದ್ ಇಸ್ಮಾಯಿಲ್ ಎಂಬವರು ಕಚೇರಿಗೆ ಆಗಮಿಸಿ ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿ, ಅಧಿಕಾರಿಗೆ ಅವಾಚ್ಯವಾಗಿ ಬೈದು, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಹಲ್ಲೆ ನಡೆಸಲು ಮುಂದಾಗಿ ಜೀವಬೆದರಿಕೆ ಒಡ್ಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 243/2026, ಕಲಂ 132, 352, 351(2) ಬಿಎನ್ಎಸ್ 2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.



