ನ.1: ನಟ ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ
ಬೆಂಗಳೂರು: ಕನ್ನಡ ರಾಜ್ಯೋತ್ಸವ (ನ.1) ದಿನದಂದು ದಿ. ನಟ ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡುವ ನಿರ್ಣಯವನ್ನು ತೆಗೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ನಟ ರಾಘವೇಂದ್ರ ರಾಜ್ಕುಮಾರ್, ಅಶ್ವಿನಿ ಪುನೀತ್ ರಾಜ್ಕುಮಾರ್, ಯುವ ರಾಜ್ಕುಮಾರ್ ಉಪಸ್ಥಿತರಿದ್ದರು.
ಪ್ರಶಸ್ತಿ ಪ್ರದಾನ ಸಮಾರಂಭ ವಿಧಾನ ಸೌಧದ ಮುಂಭಾಗದಲ್ಲಿ ನಡೆಯಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.