ಕರಾವಳಿ

ಜವಳಿ ವ್ಯಾಪಾರಕ್ಕೆಂದು ಹೋದ ಇಬ್ಬರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ,ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಖಂಡನೆ



ಸುಳ್ಯ: ಕಡಬ ತಾಲೂಕಿನ ಕಾಣಿಯೂರು ಸಮೀಪ ಕಾರಿನಲ್ಲಿ ಜವಳಿ ವ್ಯಾಪಾರ ನಡೆಸುತ್ತಿದ್ದ ಇಬ್ಬರು ಯುವಕರ ಮೇಲೆ ಗಂಭೀರವಾಗಿ ಮರಣಾಂತಿಕ ಹಲ್ಲೆ ನಡೆಸಿ ಅವರ ಕಾರನ್ನು ಹಾನಿಗೊಳಿಸಲಾಗಿದ್ದು ಈ ಅಮಾನವೀಯ ಘಟನೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಖಂಡಿಸಿದೆ.

ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.


ಹಲ್ಲೆ ನಡೆಸಿರುವ ದುಷ್ಕರ್ಮಿಗಳಿಗೆ ಕಾನೂನಿನ ಯಾವುದೇ ಭಯ ಇಲ್ಲದೇ ಇದ್ದು,ಇಂತವರ ಮೇಲೆ ಕಠಿಣ ಕ್ರಮ ಕ್ಯೆಗೊಂಡು ಈ ರೀತಿಯ ಘಟನೆ ಮರುಕಳಿಸದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!