ಕಾಣಿಯೂರು: ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ ಪ್ರಕರಣ- ಹಲವರು ಪೊಲೀಸ್ ವಶಕ್ಕೆ..?
ಪುತ್ತೂರು: ಜವಳಿ ವ್ಯಾಪಾರಿಗಳಿಗೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಯತ್ನಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
![](http://newsbites.in/wp-content/uploads/2022/10/IMG-20221020-WA017528229.jpg)
ಅಡ್ಡೂರು ನಿವಾಸಿಗಳಾದ ರಮೀಝುದ್ದೀನ್ ಮತ್ತು ರಫೀಕ್ ಎಂಬುವವರನ್ನು, ಮಹಿಳೆಯೊಬ್ಬಳ ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿತ್ತು. ಇಬ್ಬರಿಗೂ ನಿರಂತರವಾಗಿ ಥಳಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು.
ಹಲ್ಲೆ ನಡೆಸಿದ ಕಿಡಿಕೇಡಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ ವ್ಯಕ್ತವಾಗಿತ್ತಲ್ಲದೇ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಗಿತ್ತು.