ಚಿತ್ರದುರ್ಗ: ಪೊಲೀಸ್ ಇನ್ಸ್ಪೆಕ್ಟರ್ ನಿಂದ ಯುವತಿಯ ಅತ್ಯಾಚಾರ: ಗರ್ಭಪಾತ ಮಾಡಿಸಿದ ಆರೋಪ
ಚಿತ್ರದುರ್ಗ: ಚಳ್ಳಕೆರೆ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಿ.ಬಿ.ಉಮೇಶ್ ವಿರುದ್ಧ ಚಿತ್ರದುರ್ಗ ನಗರದ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಯುವತಿಯೊಬ್ಬರು ತನ್ನ ಮೇಲೆ ಉಮೇಶ್ ಅತ್ಯಾಚಾರ ಎಸಗಿ ದೂರು ದಾಖಲಿಸಿದ್ದಾರೆ. ಆರೋಪಿ ಉಮೇಶ್ ಸಂತ್ರಸ್ತೆಗೆ ಸೋದರ ಮಾವನಾಗಬೇಕು. 5 ವರ್ಷಗಳ ಹಿಂದೆ ದಾವಣಗೆರೆಯಲ್ಲಿ ಉಮೇಶ್ ಇನ್ಸ್ ಪೆಕ್ಟರ್ ಆಗಿದ್ದ ವೇಳೆ ದಾವಣಗೆರೆಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ ಸಹಾಯ ಕೇಳಿದ್ದೆವು. ಆಗ ದಾವಣಗೆರೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದರು. ಬಳಿಕ ಮತ್ತೆ ಕರೆದಾಗ ಹೋಗದಿದ್ದಕ್ಕೆ ಶಿವಮೊಗ್ಗಕ್ಕೆ ಬಂದು ಬಲತ್ಕಾರ ಮಾಡಿದರು ಎಂದು ಸಂತ್ರಸ್ತ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಶಿವಮೊಗ್ಗದಲ್ಲಿ ಯುವತಿ ಬಿಇಡಿ ಓದುತ್ತಿದ್ದ ಸಂದರ್ಭ ಆಕೆಯ ಮೇಲೆ ಅತ್ಯಾಚಾರ ನಡೆದಿದೆ. ಅತ್ಯಾಚಾರದ ಬಳಿ ಐದು ಬಾರಿ ಯುವತಿಗೆ ಗರ್ಭಪಾತ ಮಾಡಿಸಿರುವ ಆರೋಪವೂ ಕೇಳಿಬಂದಿದೆ. ಅಂದಹಾಗೆ ಸಿಪಿಐ ಉಮೇಶ್ಗೆ ಈಗಾಗಲೇ ಇಬ್ಬರು ಪತ್ನಿಯರಿದ್ದಾರೆ . ಮೂರನೇ ಪತ್ನಿಯ ರೀತಿ ತನ್ನೊಂದಿಗೆ ಇರು ಎಂದು ಯುವತಿಗೆ ಆರೋಪಿ ಒತ್ತಾಯಿಸುತ್ತಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.