ಹಿಮಾಚಲ ಪ್ರದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ- ಬಿಜೆಪಿ
ಡೆಹ್ರಾಡೂನ್: ಹಿಮಾಚಲ ಪ್ರದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.
ಬಿಜೆಪಿಯ ಪ್ರಣಾಳಿಕೆಯಾದ ಸಂಕಲ್ಪ ಪತ್ರ 2022ನ್ನು ಬಿಡುಗಡೆ ಮಾಡಿ ಮಾತನಾಡಿದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ‘’ಏಕರೂಪ ನಾಗರಿಕ ಸಂಹಿತೆ ಜಾರಿಗಾಗಿ ತಜ್ಞರ ಸಮಿತಿಯನ್ನು ರಚಿಸಲಾಗುವುದು ಮತ್ತು ಅವರ ವರದಿಯ ಆಧಾರದ ಮೇಲೆ ಅದನ್ನು ರಾಜ್ಯದಲ್ಲಿ ತರಲಾಗುವುದು. ಹಂತ ಹಂತವಾಗಿ ಎಂಟು ಲಕ್ಷ ಉದ್ಯೋಗ ಸೃಷ್ಟಿ ಮತ್ತು ಐದು ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆ ಮಾಡಲಾಗುತ್ತದೆ’ ಎಂದರು.