ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು
ಬಂಟ್ವಾಳ: ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ಬಾಲಕನನ್ನು ಬಿ.ಸಿ.ರೋಡ್ ಸಮೀಪದ ಪರ್ಲಿಯಾ ಮದ್ದ ನಿವಾಸಿ ಸಲ್ಮಾನ್ ಎನ್ನಲಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಬ್ರಹ್ಮರಕೂಟ್ಲು ಡ್ಯಾಮ್ ಬಳಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.