ಬೆಂಗಳೂರು: ತಾಯಿ-ಮಗ ಆತ್ಮಹತ್ಯೆ
ಬೆಂಗಳೂರು: ನಗರದಲ್ಲಿ ತಾಯಿ-ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಯಿ ಭಾಗ್ಯಮ್ಮ (57), ಪುತ್ರ ಶ್ರೀನಿವಾಸ್(33) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.
ವಯಸ್ಸಾದ ಹಿನ್ನೆಲೆ ಶ್ರೀನಿವಾಸ್ ಕೆಲವು ದಿನಗಳ ಹಿಂದೆ ತಾಯಿಯನ್ನು ಊರಿಂದ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದರು ಎನ್ನಲಾಗಿದ್ದು ಇದೇ ವಿಚಾರವಾಗಿ ಶ್ರೀನಿವಾಸ್ ಪತ್ನಿ ಸಂಧ್ಯಾ ತನ್ನ ಗಂಡನೊಂದಿಗೆ ಜಗಳ ಮಾಡುತ್ತಿದ್ದಳು ಎನ್ನಲಾಗಿದೆ.
ನ್.13ರಂದು ಬೆಳಗ್ಗೆ ಇದೇ ವಿಚಾರಕ್ಕೆ ದಂಪತಿ ಜಗಳವಾಡಿದ್ದಾರೆ. ಬಳಿಕ ಮನನೊಂದು ಶ್ರೀನಿವಾಸ್ ತನ್ನ ತಾಯಿಯೊಂದಿಗೆ ತಾವು ವಾಸವಾಗಿದ್ದ ಮನೆಯ ಕೋಣೆಯಲ್ಲಿ ನೇಣುಬಿಗಿದುಕೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
.