ಶಿಕ್ಷಕಿ ಬೈದಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಣಸವಾಡಿಯ ಪಿಳ್ಳಾರೆಡ್ಡಿ ನಗರದಲ್ಲಿ ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿಯನ್ನು ಅಮೃತಾ ಎಂದು ಗುರುತಿಸಲಾಗಿದೆ.
ಬಾಣಸವಾಡಿಯ ಖಾಸಗಿ ಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದ ಅಮೃತಾ, ವಿದ್ಯಾರ್ಥಿಗಳ ಮುಂದೆ ಶಿಕ್ಷಕಿ ಬೈದಿದಕ್ಕೆ ಮನನೊಂದು ನಿನ್ನೆ(ರವಿವಾರ) ಸಂಜೆ 5.15ರ ಸುಮಾರಿಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಹೇಳಲಾಗಿದೆ.
ಈ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.





