ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಗೆ ಬಾಂಬ್ ಹಾಕುವುದಾಗಿ ಬೆದರಿಕೆ: ತನಿಖೆ
ಮಧ್ಯಪ್ರದೇಶದ ಇಂದೋರ್‌ನಲ್ಲಿ ಭಾರತ್ ಜೋಡೊ ಯಾತ್ರೆಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ದೂರು ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ.
ಇಂದೋರ್‌ನ ಅಂಗಡಿಯೊಂದಕ್ಕೆ ಬಾಂಬ್ ಬೆದರಿಕೆ ಪತ್ರ ಬಂದಿದೆ. ಈ ಸಂಬಂಧ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ನಗರದ ಜುನಿ ಪ್ರದೇಶದಲ್ಲಿ ಸ್ನ್ಯಾಕ್ ಅಂಗಡಿಯೊಂದಕ್ಕೆ ಗುರುವಾರ ಸಂಜೆ ಬೆದರಿಕೆ ಪತ್ರ ಬಂದಿದ್ದು, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸುವವರು ಖಾಲ್ಸಾ ಕ್ರೀಡಾಂಗಣದಲ್ಲಿ ಉಳಿದುಕೊಂಡರೆ ನಗರದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಪತ್ರದಲ್ಲಿದೆ ಎನ್ನಲಾಗಿದೆ.