ಮಾಣಿ: ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ: ಪಾದಾಚಾರಿ ಸ್ಥಳದಲ್ಲೇ ಸಾವು
ಪುತ್ತೂರು: ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬೊಲ್ಲುಕಲ್ಲು ಎಂಬಲ್ಲಿ ನಡೆದಿದೆ. ಪುತ್ತೂರು ನಿವಾಸಿ ಸುಭಾಕರ ಮೃತಪಟ್ಟವರು.
ಸುಭಾಕರ ಅವರು ಮಗಳ ಮನೆಗೆ ಪುತ್ತೂರಿಗೆ ತೆರಳಲು ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿದೆ.
ಸೋಶಿಯಲ್ ಇಕ್ವಾ ಮಾಣಿ ಆಂಬುಲೆನ್ಸ್ ಮೂಲಕ ಆಸ್ಪತ್ರೆ ಕೊಂಡೊಯ್ಯಲಾಗಿತ್ತು.