ಕರಾವಳಿ

ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಟಿ ಮಹೋತ್ಸವಕ್ಕೆ ಅನ್ಯಧರ್ಮೀಯರ ವ್ಯಾಪಾರ ನಿಷೇಧದ ಬ್ಯಾನರ್ ಪ್ರತ್ಯಕ್ಷ



ರಾಜ್ಯದ ನಂಬರ್ ವನ್ ಯಾತ್ರಾಸ್ಥಳವಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಸಂಭ್ರಮ ಹೆಚ್ಚುತ್ತಿದೆ. ದೇಗುಲದಲ್ಲಿ ಇದೀಗ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ಭಕ್ತಾಧಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಈ ನಡುವೆ ದೇವಳದ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂಬ ಬ್ಯಾನರ್ ಪ್ರತ್ಯಕ್ಷವಾಗಿದೆ.


ಕುಮಾರಧಾರ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ ಹಿಂದೂ ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ ಬ್ಯಾನರ್ ಅಳವಡಿಸಲಾಗಿದೆ. ಆದರೆ ದೇವಳದ ಆಡಳಿತ ಮಂಡಳಿ ಅಥವಾ ಅಧಿಕಾರಿ ವರ್ಗಕ್ಕೆ ಇದರ ಬಗ್ಗೆ ಸ್ಪಷ್ಟನೆ ಇಲ್ಲ. ಸದ್ಯ ದೇವಳದ ಕಾರ್ಯ ನಿರ್ವಹಣಾಧಿಕಾರಿಯವರು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!