ಶಿಕ್ಷಕಿಗೆ ‘ಐ ಲವ್ ಯು’ ಹೇಳಿದ ನಾಲ್ವರು ವಿದ್ಯಾರ್ಥಿಗಳು ಅರೆಸ್ಟ್..!
ಶಿಕ್ಷಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ.
ಶಿಕ್ಷಕಿ ಬಗ್ಗೆ ವಿದ್ಯಾರ್ಥಿಗಳು ಅಶ್ಲೀಲ ಕಾಮೆಂಟ್ ಮಾಡುತ್ತಿರುವ ಎರಡು ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು.
ಕಿಥೌರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಧನಾ ಇನಾಯತ್‌ಪುರ್ ಹಳ್ಳಿಯ ಶಾಲೆಯಲ್ಲಿ ಘಟನೆ ನಡೆದಿದ್ದು, ಈ ಗುಂಪಿನಲ್ಲಿ ಒಬ್ಬ ವಿದ್ಯಾರ್ಥಿನಿಯೂ ಇದ್ದಾರೆ ಎನ್ನಲಾಗಿದೆ.
12ನೇ ತರಗತಿಯ ವಿದ್ಯಾರ್ಥಿಗಳು ಬಹಳ ಸಮಯದಿಂದ ತಮಗೆ ಕಿರುಕುಳ ನೀಡುತ್ತಿರುವುದಾಗಿ ಶಿಕ್ಷಕಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಜೂ. 24ರಂದು ಶಾಲಾ ಆವರಣದಲ್ಲಿ ಶಿಕ್ಷಕಿಗೆ ‘ಐ ಲವ್ ಯೂ’ ಎಂದು ಕರೆದಿದ್ದಾರೆ. ಅಲ್ಲದೆ, ಅದರ ವಿಡಿಯೊವನ್ನೂ ಮಾಡಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.