8ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಿಂದ ಸಹಪಾಠಿ ಮೇಲೆ ಅತ್ಯಾಚಾರ
ಮುಂಬೈ: ಇಲ್ಲಿನ ಮಾಟುಂಗಾ ಪ್ರದೇಶದ ಶಾಲೆಯೊಂದರಲ್ಲಿ 8ನೇ ತರಗತಿಯ ಇಬ್ಬರು ಬಾಲಕರು ತರಗತಿಯಲ್ಲಿಯೇ 13 ವರ್ಷದ ಸಹಪಾಠಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಇಬ್ಬರ ವಿರುದ್ಧ ದೂರು ದಾಖಲಾಗಿದೆ.

ವಿದ್ಯಾರ್ಥಿಗಳ ಸಹಪಾಠಿಗಳು ನೃತ್ಯ ಕಲಿಕೆಗೆ ತೆರಳಿದ್ದ ಸಂದರ್ಭದಲ್ಲಿ ಪರಿಸ್ಥಿತಿಯ ಲಾಭ ಪಡೆದ ಬಾಲಕರಿಬ್ಬರು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಬಾಲಕಿ ತನ್ನ ಮೇಲಾದ ದೌರ್ಜನ್ಯವನ್ನು ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದು, ಕೂಡಲೇ ದೂರು ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 376 ಡಿಎ ಮತ್ತು ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಾನೂನು ಸಂಘರ್ಷಕ್ಕೆ ಸಿಲುಕಿರುವ ಬಾಲಕರು ಮತ್ತು ಸಂತ್ರಸ್ತೆ ಮೂವರೂ ಎಂಟನೇ ತರಗತಿ ಓದುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.
ಬಾಲಕರನ್ನು ಬಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಿ ನಂತರ ದಕ್ಷಿಣ ಮುಂಬೈನ ಬಾಲಮಂದಿರಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.



