Uncategorized

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ: ವಿಡಿಯೋ ಮಾಡಿ ಬಹಿರಂಗಪಡಿಸುವ ಬೆದರಿಕೆ

ಮುಂಬೈ: 42 ವರ್ಷ ವಯಸ್ಸಿನ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾದ ಘಟನೆಯು ಇಲ್ಲಿಯ ಕುರ್ಲಾ ಪ್ರದೇಶದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

‘ಮನೆಗೆ ನುಗ್ಗಿದ ಮೂವರು ಪುರುಷರು ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಆಕೆಯ ಮೇಲೆ ಹರಿತ ಆಯುಧಗಳಿಂದ ಹಲ್ಲೆ ನಡೆಸಿ, ಗುಪ್ತಾಂಗಗಳಿಗೆ ಸಿಗರೇಟ್‌ನಿಂದ ಸುಟ್ಟಿದ್ದಾರೆ. ಅಸಹಜ ರೀತಿಯಲ್ಲಿ ಅವರು ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಆರೋಪಿಗಳಲ್ಲಿ ಒಬ್ಬನು ಈ ಕೃತ್ಯದ ವಿಡಿಯೊವನ್ನು ಚಿತ್ರೀಕರಿಸಿದ್ದಾನೆ. ಈ ಕುರಿತು ಪೊಲೀಸರಿಗೆ ದೂರು ನೀಡಿದರೆ ವಿಡಿಯೊವನ್ನು ಬಹಿರಂಗಪಡಿಸುವುದಾಗಿಯೂ ಆರೋಪಿಗಳು ಸಂತ್ರಸ್ತೆಯನ್ನು ಬೆದರಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯು ತನ್ನ ಮೇಲೆ ಆದ ದೌರ್ಜನ್ಯದ ಕುರಿತು ನೆರೆಯ ಮನೆಯವರಿಗೆ ತಿಳಿಸಿದ್ದರು. ಅವರು ಎನ್‌ಜಿಒ ಒಂದನ್ನು ಸಂಪರ್ಕಿಸಿ ಘಟನೆಯನ್ನು ವಿವರಿಸಿದ್ದರು. ಬಳಿಕ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ನಾಲ್ಕು ಸೆಕ್ಷನ್‌ಗಳ ಅಡಿ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!