ಕರಾವಳಿರಾಜ್ಯ

ಕಾಂತಾರದ ದೈವವನ್ನು ಅವಮಾನಿಸಿದ ಯುವಕ ‘ರಕ್ತಕಾರಿ ಸತ್ತ’ ಅನ್ನೋ ವೈರಲ್ ವಿಡಿಯೋ ಬಗ್ಗೆ ನಟ ಕಿಶೋರ್ ಏನು ಹೇಳಿದ್ರು ಗೊತ್ತಾ..?

ಇತ್ತೀಚೆಗೆ ಕಾಂತಾರ ದೈವ ಅವಮಾನಿಸಿದ ಯುವಕ ರಕ್ತಕಾರಿ ಸತ್ತ ಅನ್ನೋ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಮಾತನಾಡಿರುವ ನಟ ಕಿಶೋರ್ ಅವರು, ‘ನಂಬಿಕೆ ಇರಲಿ ಮೂಢನಂಬಿಕೆ ಬೇಡ’ ಎಂದು ಕಿವಿಮಾತು ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ.

‘ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ? ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೋ ವಾಟ್ಸ್​​ಆ್ಯಪ್​​ನಲ್ಲಿ ವೈರಲ್ ಆಗಿದೆ. ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳುವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ. ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಇರುವುದಿಲ್ಲ? ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ. ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೋ, ದೆವ್ವವೋ ಒಂದು ಸಾಧನವಷ್ಟೆ. ಸಿನಿಮಾವಾಗಲಿ ಪುರಾಣವಾಗಲಿ’ ಎಂದು ಬರಹ ಆರಂಭಿಸಿದ್ದಾರೆ ಕಿಶೋರ್.

‘ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ. ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ. ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ. ಅದರ ಹೆಸರಲ್ಲಿ ದ್ವೇಷವೂ’ ಎಂದು ಕಿಶೋರ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!