ಬ್ರೆಝಿಲ್ ಸಂಸತ್ ಮೇಲೆ ದಾಳಿ: ಪ್ರಧಾನಿ ಮೋದಿ ಬೇಸರ
ಬ್ರೆಝಿಲ್‌ನ ಸುಪ್ರೀಂ ಕೋರ್ಟ್, ಕಾಂಗ್ರೆಸ್ (ಸಂಸತ್), ಅಧ್ಯಕ್ಷೀಯ ಭವನದ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಬ್ರೆಝಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಬೆಂಬಲಿಗರು ರಾಜಧಾನಿ ಬ್ರೆಸಿಲಿಯಾದಲ್ಲಿ ನಡೆಸಿದ ದಾಂಧಲೆ ನಡೆಸಿದ್ದಾರೆ.

ಬ್ರೆಜಿಲ್ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಇತ್ತೀಚಿನ ಚುನಾವಣಾ ಸೋಲನ್ನು ಒಪ್ಪಿಕೊಳ್ಳಲು ನಿರಾಕರಿಸಿರುವ ಪ್ರತಿಭಟನಾಕಾರರು, ಸರ್ಕಾರಿ ಕಟ್ಟಡಗಳ ಮೇಲೆ ದಾಳಿ ನಡೆಸುವ ಮೂಲಕ ಪ್ರತಿಕಾರದ ಕ್ರಮಕ್ಕೆ ಮುಂದಾಗಿದ್ದಾರೆ.
2022ರ ಅಕ್ಟೋಬರ್ 31 ರಂದು ನಡೆದ ಚುನಾವಣೆಯಲ್ಲಿ ಬೋಲ್ಸನಾರೊ ಅವರನ್ನು ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಕಡಿಮೆ ಅಂತರದಿಂದ ಸೋಲಿಸಿ ಅಧಿಕಾರಕ್ಕೆರಿದ್ದರು. ಅದಾದ ಒಂದು ವಾರದಲ್ಲೇ ಈ ಗಲಭೆಗಳು ಭುಗಿಲೆದ್ದಿವೆ.
ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.
‘ಬ್ರೆಸಿಲಿಯಾದಲ್ಲಿ ಸರ್ಕಾರಿ ಸಂಸ್ಥೆಗಳ ಮೇಲೆ ನಡೆದ ದಾಳಿ, ಗಲಭೆ ಮತ್ತು ವಿಧ್ವಂಸಕ ಕೃತ್ಯಗಳ ಬಗ್ಗೆ ತೀವ್ರ ಕಳವಳವಾಗಿದೆ. ಪ್ರಜಾಪ್ರಭುತ್ವ ಸಂಪ್ರದಾಯಗಳನ್ನು ಎಲ್ಲರೂ ಗೌರವಿಸಬೇಕು. ಬ್ರೆಜಿಲ್‌ಗೆ ನಮ್ಮ ಸಂಪೂರ್ಣ ಬೆಂಬಲವಿದೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.