ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಾಳೆ ಪುತ್ತೂರಿಗೆ
ಪುತ್ತೂರು: ಜ.22ರಂದು ಪುತ್ತೂರಿನಲ್ಲಿ ನಡೆಯಲಿರುವ ಭೈರವೈಕ್ಯ ಜಗದ್ಗುರು ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ ಹಾಗೂ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕ ದಶಮಾನೋತ್ಸವ ಪ್ರಯುಕ್ತ ನಡೆಯುವ ಒಕ್ಕಲಿಗರ ಬೃಹತ್ ಸಮಾವೇಶಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ, ಒಕ್ಕಲಿಗ ಮುಖಂಡರು ಆಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆಗಮಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಸಹಸ್ರ ಸಂಖ್ಯೆಯಲ್ಲಿ ಸಾರ್ವಜನಿಕರು, ಕಾರ್ಯಕರ್ತರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಾಂಗ್ರೆಸ್ ಮುಖಂಡರು ಮನವಿ ಮಾಡಿದ್ದಾರೆ.