ಕಡಬ: ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆ ಮೃತ್ಯು
ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬವರ ಪತ್ನಿ ಗೀತಾ(46. ವ) ಮೃತಪಟ್ಟ ಮಹಿಳೆ.

ಕುಮಾರಧಾರ ನದಿಯ ಇನ್ನೊಂದು ಇನ್ನೊಂದು ಬದಿಯಿಂದ ಹುಲ್ಲು ಸಂಗ್ರಹಿಸಿ ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ತುಂಬಿಸಿಕೊಂಡು ತೆಪ್ಪದ ಮೂಲಕ ನದಿಯ ಮದ್ಯ ಭಾಗಕ್ಕೆ ಬಂದಾಗ ಬೀಸಿದ ಭಾರೀ ಗಾಳಿಗೆ ತೆಪ್ಪ ಮಗುಚಿ ಬಿದ್ದಿದೆ ಎನ್ನಲಾಗಿದೆ.
ತೆಪ್ಪದಲ್ಲಿದ್ದ ಇನ್ನಿಬ್ಬರು ಮಹಿಳೆಯರು ಈಜಿ ದಡ ಸೇರಿದ್ದಾರೆ. ವಿಷಯ ತಿಳಿದು ನೀರಿಗಿಳಿದ ಸ್ಥಳೀಯರು ಗೀತಾ ಅವರನ್ನು ರಕ್ಷಿಸುವ ಪ್ರಯತ್ನ ಪಟ್ಟರಾದರೂ ಅದಾಗಲೇ ಗೀತಾ ಮೃತಪಟ್ಟಿದ್ದಾರೆ
ಮೃತರ ಪತಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಇಬ್ಬರು ಪುತ್ರರು ಹಾಗು ಓರ್ವ ಪುತ್ರಿಯನ್ನು ಅಗಲಿದ್ದಾರೆ