ಕ್ರೈಂ

ಗಣರಾಜ್ಯೋತ್ಸವಕ್ಕೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ: ನಾಲ್ವರ ಬಂಧನ



ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ನಾಲ್ವರು ಆರೋಪಿಗಳನ್ನು ಜ.26ರಂದು ಬಂಧಿಸಿರುವುದಾಗಿ ವರದಿಯಾಗಿದೆ.

ಅಹಮದಾಬಾದ್ ರೈಲು ನಿಲ್ದಾಣ ಮತ್ತು ಗೀತಾ ಮಂದಿರ ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಬಗ್ಗೆ ಬಂಧಿತ ಆರೋಪಿಗಳು ಬೆದರಿಕೆ ಪತ್ರದಲ್ಲಿ ಉಲ್ಲೇಖಿಸಿದ್ದರು.

ಆರೋಪಿಗಳ ಪತ್ತೆಗೆ ಅಹಮದಾಬಾದ್ ಅಪರಾಧ ವಿಭಾಗ ಕಾರ್ಯಾಚರಣೆ ನಡೆಸಿತ್ತು. 

ನಾಲ್ವರಲ್ಲಿ ಇಬ್ಬರನ್ನು ಅಹಮದಾಬಾದ್‌ನಲ್ಲಿ ಬಂಧಿಸಲಾಗಿದ್ದು, ಮತ್ತಿಬ್ಬರನ್ನು ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಬಂಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!