ನಡು ರಸ್ತೆಯಲ್ಲಿ ಹೊತ್ತಿ ಉರಿದ ಕಾರು: ದಂಪತಿ ದಾರುಣ ಸಾವು
ಕೇರಳದ ಕಣ್ಣೂರಿನ ಜಿಲ್ಲಾ ಸರಕಾರಿ ಆಸ್ಪತ್ರೆ ಬಳಿ ಫೆ.2ರಂದು ನಡು ರಸ್ತೆಯಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ದಂಪತಿ ಸುಟ್ಟು ಕರಕಲಾಗಿರುವ ಘಟನೆ ವರದಿಯಾಗಿದೆ.
ಬೆಂಕಿ ಹೊತ್ತಿಕೊಂಡ ನಂತರ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ನಾಲ್ವರು ಪಾರಾಗಿದ್ದಾರೆ. ಸಹ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಮೃತಪಟ್ಟ ಮಹಿಳೆ ಗರ್ಭಿಣಿಯಾಗಿದ್ದು, ಆಸ್ಪತ್ರೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಕಾರಿನ ಮುಂಭಾಗದ ಬಾಗಿಲು ತೆರೆದು ದಂಪತಿಯನ್ನು ರಕ್ಷಿಸಲು ಪ್ರಯತ್ನಿಸಿದರೂ ವಿಫಲವಾಗಿದೆ.