ಮಂಗಳೂರು: ಚಿನ್ನದ ಅಂಗಡಿಯಲ್ಲಿ ವ್ಯಕ್ತಿಯೋರ್ವರಿಗೆ ಚೂರಿ ಇರಿತ- ಮೃತ್ಯು
ಮಂಗಳೂರು: ಚಿನ್ನದ ಅಂಗಡಿಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ಹಂಪನಕಟ್ಟೆಯ ಬಳಿ ನಡೆದಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ.

ಹಂಪನಕಟ್ಟೆಯ ಮಂಗಳೂರು ಜ್ಯುವೆಲ್ಲರ್ಸ್ ನಲ್ಲಿ ಇಂದು ಸಂಜೆ ನಡೆದ ಚೂರಿ ಇರಿತದಿಂದ ಅತ್ತಾವರ ನಿವಾಸಿ ರಾಘವ ಆಚಾರಿ (51. ವ) ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಈ ಹಿಂದೆ ರಾಘವ ಅವರು ಗೋಲ್ಡ್ ಪ್ಯಾಲೆಸ್ ಜ್ಯುವೆಲ್ಲರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಿಂದ ಅವರು ಮಂಗಳೂರು ಜ್ಯುವೆಲ್ಲರಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಯಾಕಾಗಿ ಚೂರಿ ಇರಿತ ನಡೆಯಿತು ಎನ್ನುವುದು ತಿಳಿದು ಬಂದಿಲ್ಲ.