ಕಡಬ: ಬಲ್ಯದಲ್ಲಿ ಕಾರು-ಬೈಕ್ ನಡುವೆ ಅಪಘಾತ; ಬೈಕ್ ಸವಾರನಿಗೆ ಗಂಭೀರ ಗಾಯ
ಕಡಬ ಸಮೀಪದ ಬಲ್ಯ ಎಂಬಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಫೆ.23ರಂದು ಬೆಳಿಗ್ಗೆ ನಡೆದಿದೆ.

ಮಂಗಳೂರು ಕಡೆಯಿಂದ ಸುಬ್ರಹ್ಮಣ್ಯಕ್ಕೆ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ದಂಪತಿ ಪ್ರಯಾಣಿಸುತ್ತಿದ್ದ ಆಲ್ಟೊ ಕಾರು ಬಲ್ಯ ತಲುಪುತ್ತಿದ್ದಂತೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಸವಾರ ನೆಲ್ಯಾಡಿ ರಸ್ತೆಗೆ ತನ್ನ ಬೈಕನ್ನು ತಿರುಗಿಸುವ ವೇಳೆ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ಕಾಲಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಮತ್ತು ಬೈಕಿಗೂ ಹಾನಿಯಾಗಿದೆ.