ಕರಾವಳಿರಾಜಕೀಯ

ಆರ್ಯಾಪು ಗ್ರಾ.ಪಂ ಉಪ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಭೇರಿ

ಪುತ್ತೂರು ತಾಲೂಕಿನ ಆರ್ಯಾಪು ಗ್ರಾ.ಪಂನ ಆರ್ಯಾಪು ವಾರ್ಡ್ 4ರ ಸದಸ್ಯನೋರ್ವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯತೀಶ್ ದೇವರವರು 171 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.


ಆರ್ಯಾಪು ವಾರ್ಡ್ 4ರ ಸದಸ್ಯ ಗಿರೀಶ್ ಮರಿಕೆಯವರ ಮರಣದಿಂದ ತೆರವಾದ ಸ್ಥಾನಕ್ಕೆ ಫೆ.25ರಂದು ಮತದಾನ ಪ್ರಕ್ರಿಯೆಗಳು ನಡೆದಿದೆ. ಮತ ಎಣಿಕೆ ಕಾರ್ಯಗಳು ಫೆ.28ರಂದು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು.

ಬಿಜೆಪಿ ಬೆಂಬಲಿತ ಅಭ್ಯರ್ಥಿ ಯತೀಶ್ ದೇವರವರು 498 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪ್ರಜ್ವಲ್ ರೈ ತೊಟ್ಲರವರು 327 ಮತಗಳನ್ನು ಪಡೆದುಕೊಂಡರು. 11 ಮತಗಳು ತಿರಸ್ಕೃತಗೊಂಡಿದೆ.

Leave a Reply

Your email address will not be published. Required fields are marked *

error: Content is protected !!